ನವದೆಹಲಿ: ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ‘ಆಯುಷ್ಮಾನ್ ಭಾರತ್’ನಡಿಯಲ್ಲಿ ಸುಮಾರು 1.5 ಲಕ್ಷ ಆರೋಗ್ಯ ಕೇಂದ್ರಗಳು ದೇಶದಾದ್ಯಂತ ಸ್ಥಾಪನೆಗೊಳ್ಳಲಿದೆ.
ದೇಶದ ಬಡ ಮತ್ತು ಮಧ್ಯಮವರ್ಗದ ಜನತೆಗೆ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಗಳು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಡುತ್ತಿದೆ. ಆಯುಷ್ಮಾನ್ ಯೋಜನೆ ಅತ್ಯಂತ ಮಹತ್ವಪೂರ್ಣ ಯೋಜನೆಯಾಗಿದ್ದು, ದೇಶದ 10 ಕೋಟಿ ಕುಟುಂಬಗಳಿಗೆ ವಾರ್ಷಿಕ ರೂ.5ಲಕ್ಷದ ಆರೋಗ್ಯ ವಿಮೆಯನ್ನು ಇದು ನೀಡಲಿದೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಕಾನ್ಫರೆನ್ಸ್ನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಜನರಿಗೆ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸಲು ಹಲವಾರು ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದಿದ್ದಾರೆ.
ಆಯುಷ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ಹಂತ ಹಂತವಾಗಿ ದೇಶದಲ್ಲಿ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡಲಿದೆ. ಈ ಕೇಂದ್ರಗಳು ಇಳಿ ವಯಸ್ಸಿನ ರೋಗಿಗಳ ಆರೋಗ್ಯ ಕಾಳಜಿಯನ್ನೂ ವಹಿಸಲಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.