ನವದೆಹಲಿ: ಮುಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಂಜನ್ ಗೊಗೋಯ್ ಅವರು ನೇಮಕವಾಗಿದ್ದಾರೆ. ಗುರುವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ನೇಮಕವನ್ನು ಮಾಡಿದ್ದು, ಕೇಂದ್ರ ಕಾನೂನು ಸಚಿವಾಲಯ ಬೆಳವಣಿಗೆಯನ್ನು ದೃಢಪಡಿಸಿದೆ.
2018ರ ಅಕ್ಟೋಬರ್ 3ರಂದು ದೇಶದ 46ನೇ ಮುಖ್ಯನ್ಯಾಯಮೂರ್ತಿಯಾಗಿ ರಂಜನ್ ಗೊಗೋಯ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿರುವ ದೀಪಕ್ ಮಿಶ್ರಾ ಅವರ ಅವಧಿ 2019ರ ನವೆಂಬರ್ಗೆ ಅಂತ್ಯಗೊಳ್ಳುತ್ತಿದೆ.
ಸುಪ್ರೀಂಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ರಂಜನ್ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ದೀಪಕ್ ಮಿಶ್ರಾ ಸೆ.4ರಂದು ಶಿಫಾರಸ್ಸು ಮಾಡಿದ್ದರು.ಈ ಶಿಫಾರಸ್ಸಿಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.