ಮಂಗಳೂರು: ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡು ದಿನಾಂಕ 18-9-2018 ರಂದು ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಟ್ರಾಫಿಕ್ ಪೋಲಿಸ್ ಬ್ಯಾರಿಕೇಡ್ಗಳನ್ನು ಪೋಲಿಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಉಮಾಪ್ರಶಾಂತ್ ಡೆಪ್ಯೂಟಿ ಕಮಿಷನರ್ ಆಫ್ ಪೋಲಿಸ್ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂತಹ ಕಾರ್ಯಕ್ರಮಗಳಿಗೆ ಭೇಟಿ ಕೊಡುವ ಮುಖ್ಯ ಉದ್ದೇಶ ಜನರಲ್ಲಿ ಜಾಗೃತಿ ಮೂಡಿಸುವುದು ಆಗಿದೆ. ಪೋಷಕರು ಹದಿನೆಂಟು ವರ್ಷ ತುಂಬದ ಮಕ್ಕಳಿಗೆ ವಾಹನವನ್ನು ಚಲಾಯಿಸಲು ಕೊಡಬಾರದು ಮತ್ತು ಅತಿಯಾದ ಮೊಬೈಲ್ ಬಳಕೆಯ ಬಗ್ಗೆ ಎಚ್ಚರವಹಿಸಬೇಕು.
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಅಭ್ಯಸಿಸುವುದರಿಂದ ತಮ್ಮಿಂದಾಗುವ ತಪ್ಪುಗಳನ್ನು ತಪ್ಪಿಸಬಹುದು. ಟ್ರಾಫಿಕ್ ರಸ್ತೆ ನಿಯಮ ಉಲ್ಲಂಘನೆ ಮತ್ತು ಇನ್ನಿತರ ಅಪರಾಧ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಹಿಳೆಯರು ಶಿಕ್ಷಣದ ಮೂಲಕ ವ್ಯಕ್ತಿತ್ವ ವಿಕಸನ ಹೊಂದಬಹುದು. ಗುರುಹಿರಿಯರನ್ನು, ತಂದೆ ತಾಯಿಯನ್ನು ಗೌರವಿಸಿ ಜೊತೆಗೆ ಪ್ರಕೃತಿ ಮತ್ತು ದೇಶವನ್ನು ಪ್ರೀತಿಸಿ ಮತ್ತು ವಿದ್ಯಾರ್ಥಿ ಜೀವನವನ್ನು ಸಂಭ್ರಮಿಸಿ ಆದರೆ ಆ ಸಂಭ್ರಮ ನಿಮ್ಮ ಭವಿಷ್ಯಕ್ಕೆ ಮುಳ್ಳಾಗದಂತೆ ಎಚ್ಚರವಹಿಸಿ ಎಂದರು.
ನಂತರ ವಿಕಾಸ್ ಫಿಸಿಯೋಥೆರಪಿ ಕಾಲೇಜು, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಹನ ನಡೆಸಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಸಮಾಜ ಸೇವೆಯನ್ನು ಮಾಡಲು ನಾನು ಈ ವೃತ್ತಿಯನ್ನು ಆಯ್ಕೆ ಮಾಡಿದ್ದೇನೆ. ಹಾಗೆಯೇ ಸಮಾಜ ಸೇವೆ ಮಾಡಲು ಯಾವುದೇ ವೃತ್ತಿಯಲ್ಲಿಯೂ ಅವಕಾಶವಿದೆ ಎಂದರು. ಪೋಲಿಸ್ ಇಲಾಖೆಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದಲ್ಲಿ ಸಲಹೆಗಾರರಾದ ಡಾ.ಅನಂತ್ ಪ್ರಭು ಜಿ, ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಶ್ರೀ ಪಾರ್ಥಸಾರಥಿ ಪಾಲೆಮಾರ್, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಜಯ್ ಠಾಕೂರ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಜಾರಾಮ್ ರಾವ್ ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರುತಿ ಎಸ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.