ಕಠ್ಮಂಡು: ಪ್ರಕೃತಿಯ ಅದ್ಭುತ ಕೊಡುಗೆಗಳಲ್ಲಿ ಒಂದಾದ ವನ್ಯಜೀವಿಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಮತ್ತು ಅನಿವಾರ್ಯತೆಯೂ ಹೌದು. ಆದರೆ ಹುಲಿ ಸಂರಕ್ಷಣೆ ಎಂಬುದು ಭಾರತ ಸೇರಿದಂತೆ ವಿಶ್ವಕ್ಕೆ ಅತೀದೊಡ್ಡ ಸವಾಲಾಗಿದೆ.
ನೇಪಾಳ ಈ ನಿಟ್ಟಿನಲ್ಲಿ ಮಹತ್ವದ ಸಾಧನೆಯನ್ನು ಮಾಡುತ್ತಿದ್ದು, ವಿಶ್ವದಲ್ಲೇ ಹುಲಿಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಿದ ಏಕೈಕ ರಾಷ್ಟ್ರ ಎಂಭ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೇರೆ ರಾಷ್ಟ್ರಗಳಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ನೇಪಾಳದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಬಗ್ಗೆ ಅಲ್ಲಿನ ಸರ್ಕಾರದ ವರದಿಯಲ್ಲಿ ಸ್ಪಷ್ಟವಾಗಿದೆ.
ಪರಿಸರ ಮತ್ತು ಪ್ರಕೃತಿಯ ಸೌಂದರ್ಯವನ್ನು ಉಳಿಸಲು ವನ್ಯಜೀವಿಗಳ ಸಂರಕ್ಷಣೆ ಅನಿವಾರ್ಯವಾಗಿದ್ದು, ಇದಕ್ಕಾಗಿ ಎಲ್ಲಾ ಸರ್ಕಾರಗಳು ಸಾಕಷ್ಟು ಹಣವನ್ನು ವಿನಿಯೋಗ ಮಾಡುತ್ತಿವೆ. ಆದರೂ ಸಂರಕ್ಷಣಾ ಕಾರ್ಯ ಅಷ್ಟೊಂದು ಪ್ರಭಾವಶಾಲಿಯಾಗಿ ನಡೆಯುತ್ತಿಲ್ಲ.
ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳಗೊಳಿಸಲು ‘ವರ್ಲ್ಡ್ ವೈಲ್ಡ್ಲೈಫ್ ಫಂಡ್’ 2022ಕ್ಕೆ ಟಾರ್ಗೆಟ್ ರೂಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.