ಮಂಗಳೂರು : ನಗರದ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಕೈಗೊಳ್ಳುವುದರ ಮೂಲಕ ಆಚರಿಸಲಾಯಿತು.
ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀಯುತ ಡಿ. ವೇದವ್ಯಾಸ್ ಕಾಮತ್ರವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮೌಲ್ಯಗಳನ್ನು ಪ್ರತಿದಿನವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಮಾಜಿ ಸಚಿವರು ಹಾಗೂ ವಿಕಾಸ್ ಸಮೂಹ ಶಿಕ್ಷಣಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಕೃಷ್ಣ ಜೆ ಪಾಲೆಮಾರ್ ಮಾತನಾಡುತ್ತಾ, ನಮ್ಮ ಪ್ರಧಾನ ಮಂತ್ರಿಯವರ ಸ್ವಚ್ಛ ಭಾರತ ಪರಿಕಲ್ಪನೆಯ ಪ್ರಾಮುಖ್ಯತೆಯನ್ನು ವಿಕಾಸ್ ಕಾಲೇಜಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಮನವರಿಕೆ ಮಾಡುತ್ತಿದ್ದೇವೆ. ಪ್ರಸ್ತುತ ದಿನಗಳಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಆವಶ್ಯಕತೆ ಇದೆ ಎಂದರು.
ವಿಕಾಸ್ ಎಜ್ಯುಕೇಷನ್ ಟ್ರಸ್ಟ್ನ ಟ್ರಸ್ಟಿಗಳಾದ ಶ್ರೀಯುತ ಜೆ.ಕೊರಗಪ್ಪ, ಶ್ರೀಯುತ ಸೂರಜ್ ಕಲ್ಯ, ವಿಕಾಸ್ ಎಜ್ಯು ಸೊಲ್ಯುಷನ್ ನಿರ್ದೇಶಕರಾದ ಡಾ|ಅನಂತ್ಪ್ರಭು ಜಿ., ವಿಕಾಸ್ ವಿದ್ಯಾಸಂಸ್ಥೆಯ ಸಮನ್ವಯಾಧಿಕಾರಿ ಶ್ರೀಯುತ ಪಾರ್ಥಸಾರಥಿ ಜೆ ಪಾಲೆಮಾರ್, ಕೌನ್ಸೆಲರ್ ಡಾ ಮಂಜುಳಾ ರಾವ್, ಪ್ರಾಂಶುಪಾಲರಾದ ಪ್ರೊ| ಟಿ. ರಾಜಾರಾಮ್ ರಾವ್, ಕಾಮರ್ಸ್ ಇನ್ಚಾರ್ಜ್ ಶ್ರೀಮತಿ ಐಶ್ವರ್ಯ ರಾವ್ ಉಪಸ್ಥಿತರಿದ್ದರು. ವಿಕಾಸ್ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.