ನವದೆಹಲಿ: ರೈತರು ಬೆಳೆದ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.
2018-19ರ ಸಾಲಿನಲ್ಲಿ ರೈತರು ಬೆಳೆದ, 2019-20ನೇ ಸಾಲಿಗೆ ಮಾರುಕಟ್ಟೆಗೆ ಬರಲಿರುವ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪ್ರತಿ ಕ್ವಿಂಟಾಲ್ ಗೋಧಿಗೆ ರೂ.105, ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ರೂ.845, ಮಸೂರಿಗೆ ರೂ.225, ಬಾರ್ಲಿಗೆ ರೂ.30, ಸಾಸಿವೆಗೆ ರೂ.200 ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಈ ಹಿಂದೆ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಳೆಯನ್ನು ಏರಿಸಿದ್ದ ಮೋದಿ ಸರ್ಕಾರ, ಇದೀಗ ಹಿಂಗಾರು ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ ರೈತರ ಸಂಕಷ್ಟ ದೂರ ಮಾಡುವ ಕೆಲಸ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.