2018 ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪದಕ ಜಯಿಸಿದ ಭಾರತೀಯ ಕ್ರೀಡಾಳುಗಳನ್ನು ದೆಹಲಿಯಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಅವರ ಸಾಧನೆಯನ್ನು ಕೊಂಡಾಡಿದರು.
ನವದೆಹಲಿ: 2018ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಪದಕ ಜಯಿಸಿ ಭಾರತಕ್ಕೆ ಹೆಮ್ಮೆ ತಂದಿತ್ತ ಕ್ರೀಡಾಳುಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ಸನ್ಮಾನ ಮಾಡಿದರು.
ಕ್ರೀಡಾಳುಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕ್ರೀಡಾಳುಗಳ ಅಮೋಘ ಸಾಧನೆಯನ್ನು ಕೊಂಡಾಡಿದರು. ಮಾನಸಿಕ ದೃಢತೆಯೇ ಅವರ ಸಾಧನೆಗೆ ಕಾರಣ ಎಂದು ಬಣ್ಣಿಸಿದರು. ಜಾಗತಿಕ ಮಟ್ಟದಲ್ಲಿ ಭಾರತದ ಘನೆತಯನ್ನು ಹೆಚ್ಚಿಸಿರುವುದಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಕ್ರೀಡಾಳುಗಳು ಪದಕ ಗೆಲ್ಲುವಲ್ಲಿ ಮಹತ್ವದ ಕೊಡುಗೆ ನೀಡಿದ ಕೋಚ್ಗಳನ್ನೂ ಮೋದಿ ಶ್ಲಾಘಿಸಿದ್ದಾರೆ.
ಕ್ರೀಡಾ ಸ್ಫೂರ್ತಿಯನ್ನು ಇದೇ ರೀತಿ ಮುಂದುವರೆಸಿ, ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸಿದರು.
ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತೀಯರು 15 ಬಂಗಾರ, 24 ಬೆಳ್ಳಿ, 33 ಕಂಚನ್ನು ಗೆದ್ದಿದ್ದಾರೆ.
source; Narendramodi.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.