ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತಿಕ್ಕಾಟಗಳು ಮುಂದುವರೆದಿರುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನಜೀಬ್ ಜಂಗ್ ಮತ್ತು ಸರ್ಕಾರದ ನಡುವಿನ ತಿಕ್ಕಾಟಗಳ ಬಗ್ಗೆ ಈ ವೇಳೆ ಮಾತುಕತೆಗಳು ನಡೆಯಲಿವೆ ಎನ್ನಲಾಗಿದೆ.
ಲೆ.ಗವರ್ನರ್ ನಜೀಬ್ ಜಂಗ್ ಅವರಿಂದ ನೇಮಿಸಲ್ಪಟ್ಟ ಗೃಹ ಕಾರ್ಯದರ್ಶಿ ಧರಮ್ ಪಾಲ್ ಅವರು ತಮ್ಮ ಸ್ಥಾನವನ್ನು ತೆರವುಗೊಳಿಸಬೇಕು ಎಂದು ಎಎಪಿ ಸೂಚನೆ ನೀಡಿದ್ದು, ಸೂಚನೆ ಮೀರಿದರೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
ಒಟ್ಟಿನಲ್ಲಿ ಜಂಗ್ ಮತ್ತು ಎಎಪಿ ನಡುವಿನ ಜಂಗಿ ಕುಸ್ತಿ ಸದ್ಯಕ್ಕೆ ಮುಕ್ತಾಗೊಳ್ಳುವ ಕ್ಷಣಗಳು ಕಾಣುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಗೃಹಸಚಿವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.