ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನವೆಂಬರ್ 22ಕ್ಕೆ ಮುಂದೂಡಿದೆ.
ಅಲ್ಲದೇ ಮುಂದಿನ ವಿಚಾರಣೆಯವರೆಗೂ ಈ ಹಿಂದಿನ ಆದೇಶ ಸಂಪೂರ್ಣ ಮುಂದುವರೆಯಲಿದೆ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರ 2011-12ರ ಅವಧಿಯ ಆದಾಯ ತೆರಿಗೆ ಮರು ಮೌಲ್ಯಮಾಪನಕ್ಕೆ ನೀಡಿದ್ದ ಆದೇಶವನ್ನು ಹಿಂಪಡೆಯಲು ನಿರಾಕರಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಮತ್ತು ಸೋನಿಯಾ ಅವರ ಆದಾಯ ತೆರಿಗೆ ಮೌಲ್ಯಮಾಪನವನ್ನು ಮರು ತೆರೆಯಬೇಕು ಎಂದು ದೆಹಲಿ ಕೋರ್ಟ್ ಈ ಹಿಂದೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಇವರಿಬ್ಬರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಡಿ.4ರಂದು ಇದು ವಿಚಾರಣೆಗೆ ಬರಲಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.