ಮಂಗಳೂರು: ರಾಜ್ಯದ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಪರೀಕ್ಷಾರ್ಥ ಅವಧಿಯನ್ನು ಘೋಷಣೆ ಮಾಡಬೇಕಾಗಿದ್ದು, ಇಲಾಖೆಯಲ್ಲಿ 4 ವರ್ಷ ಪೂರೈಸಿದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಪರೀಕ್ಷಾರ್ಥ ಅವಧಿಯನ್ನು ಇದುವರೆವಿಗೂ ಘೋಷಣೆ ಮಾಡಿಲ್ಲ. ಇದರಿಂದ ಅವರು ಆತಂಕಕ್ಕೆ ಒಳಗಾಗಿದ್ದು, ತುರ್ತಾಗಿ ಪರೀಕ್ಷಾರ್ಥ ಅವಧಿಯನ್ನು ಘೋಷಣೆ ಮಾಡಬೇಕೆಂದು ಬಿಜೆಪಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ಈ ಕುರಿತಾಗಿ ಹಲವಾರು ಬಾರಿ ವಿನಂತಿಸಿದ್ದು, ಪರೀಕ್ಷಾರ್ಥ ಅವಧಿಯ ಘೋಷಣೆಗೆ ಕ್ರಮ ಜರುಗಿಸುವಂತೆ ತಿಳಿಸಲಾಗಿದೆ. ಈ ಕುರಿತು ಕೂಡಲೇ ಗಮನಹರಿಸಿ ಪರೀಕ್ಷಾರ್ಥ ಅವಧಿಯನ್ನು ಯಶಸ್ವಿಯಾಗಿ ಪೂರೈಸಿರುವ ಅರ್ಹ ಅಭ್ಯರ್ಥಿಗಳ ಪರೀಕ್ಷಾರ್ಥ ಅವಧಿಯನ್ನು ಘೋಷಣೆ ಮಾಡಬೇಕೆಂದು ಅವರು ವಿನಂತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.