ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ನ್ಯಾಯಾಲಯಕ್ಕೆ ತಾವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳವಾರ ವಾಪಾಸ್ ಪಡೆದುಕೊಂಡಿದ್ದಾರೆ.
ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು ತೋಮರ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದರು.
ಇನ್ನೊಂದೆಡೆ ತೋಮರ್ ಅವರು ತಾನು ಮಧ್ಯವರ್ತಿಗಳ ಸಹಾಯದಿಂದ ನಕಲಿ ಸರ್ಟಿಫೀಕೇಟನ್ನು ತಯಾರಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿದೆ. ಆದರೆ ಈ ಬಗ್ಗೆ ಪೊಲೀಸರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.