ಬ್ಯುನೋಸ್ ಏರ್ಸ್: ಅರ್ಜೆಂಟೀನಾದ ಬ್ಯುನೋಸ್ ಏರ್ಸ್ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮಕೈಗೊಳ್ಳಲು 9 ಅಂಶಗಳ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.
ಜಿ20 ಸಮಿತ್ನಲ್ಲಿ ಮೋದಿ ಪ್ರಸ್ತುತಪಡಿಸಿದ ಕಾರ್ಯಕ್ರಮಗಳ ಇಮೇಜ್ನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲದೇ ಮೋದಿ, ದೇಶಭ್ರಷ್ಟ ಆರ್ಥಿಕ ಅಪರಾಧಿಗಳಿಗೆ ಪ್ರವೇಶ ನಿರಾಕರಿಸಲು, ಸುರಕ್ಷಿತ ವಾತಾವರಣ ಕಲ್ಪಿಸದಿರಲು ಜಿ20 ದೇಶಗಳು ಜಂಟಿಯಾಗಿ ಪ್ರಯತ್ನ ನಡೆಸಬೇಕು ಎಂದರು. ಯುನೈಟೆಡ್ ನೇಷನ್ಸ್ ಕನ್ವೆನ್ಷನ್ ಅಗೇಂಸ್ಟ್ ಕರಪ್ಷನ್(ಯುಎನ್ಸಿಎಸಿ) ಮತ್ತು ಯುನೈಟೆಡ್ ನೇಷನ್ಸ್ ಕನ್ವೆನ್ಷನ್ ಅಗೇಂಸ್ಟ್ ಟ್ರಾನ್ಸ್ನ್ಯಾಷನಲ್ ಆರ್ಗನೈಝ್ಡ್ ಕ್ರೈಮ್ (ಯುಎನ್ಓಟಿಸಿ)ಯ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರತಿಪಾದಿಸಿದರು.
source: zeenews
Building consensus.
In his intervention at the 2nd session at #G20Summit on international trade, international financial and tax systems, PM @narendramodi presented a 9-point programme to take action against fugitive economic offenders. pic.twitter.com/2d3aguBtf5
— Raveesh Kumar (@MEAIndia) November 30, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.