News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಿಯು ಉಪನ್ಯಾಸಕರ ನೇಮಕ ತಾತ್ಕಾಲಿಕ ಸ್ಥಗಿತ

PUC

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯು ಉಪನ್ಯಾಸಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಪರಿಶಿಷ್ಠ ಜಾತಿ/ ಪಂಗಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಟ ಅಂಕ ಶೇ.55 ನಿಗದಿ ಮಾಡಲಾಗಿದ್ದು ಇದು ಶೇ.50ರಷ್ಟೇ ಇದೆ ಎಂದು ಅಭ್ಯರ್ಥಿಗಳು ಆಕ್ಷೇಪಿಸಿದ್ದಾರೆ. ಇಲಾಖೆ ಸಿಬ್ಬಂದಿಗಳಿಂದ ವಿವರಣೆ ಕೋರಲಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಜೂ.15ರಿಂದ 30ಕ್ಕೆ ಮುಂದೂಡಲಾಗಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಪದವಿ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಂತೆ ಪಿಯು ಉಪನ್ಯಾಸಕರ ನೇಮಕಾತಿ ನಡೆಸಲು ಸರಕಾರ ಚಿಂತಿಸಿದ್ದು, ಪರಿಶಿಷ್ಠ ಜಾತಿ/ಪಂಗಡವರಿಗೆ ಯಾವುದೇ ಮೀಸಲಾತಿ ನೀಡಲಾಗಿಲ್ಲ. ಆದ್ದರಿಂದ ಪಿಯು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top