ನವದೆಹಲಿ: ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ನದಿ ಗಂಗೆಯನ್ನು ಶುದ್ಧೀಕರಿಸಲು ಕೇಂದ್ರ ಸರ್ಕಾರ ಭಾರೀ ಪ್ರಯತ್ನಗಳನ್ನು ನಡೆಸುತ್ತಿದ್ದು, ನದಿಯ ಶುದ್ಧೀಕರಣಕ್ಕೆ ಸಂಬಂಧಿಸಿದ ನೂರಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ.
‘ನ್ಯಾಷನಲ್ ಮಿಶನ್ ಫಾರ್ ಕ್ಲೀನ್ ಗಂಗಾ’ ಕಾರ್ಯಕ್ರಮದಡಿ ಇದುವರೆಗೆ ಕೇಂದ್ರ ಸರ್ಕಾರ ಬರೋಬ್ಬರಿ 24 ಸಾವಿರ ಕೋಟಿ ಮೊತ್ತದ 254 ಯೋಜನೆಗಳಿಗೆ ಅನುಮೋದನೆಯನ್ನು ನೀಡಿದೆ. ಇವುಗಳ ಪೈಕಿ ಕಳೆದ ನಾಲ್ಕು ವರ್ಷಗಳಿಂದ 5 ಸಾವಿರ ಕೋಟಿಗಳನ್ನು ವಿನಿಯೋಗಿಸಲಾಗಿದೆ.
ಇಂಡಿಯಾ ವಾಟರ್ ಇಂಪ್ಯಾಕ್ಟ್ ಸಮಿತ್ 2018ನ್ನು ಉದ್ದೇಶಿಸಿ ಮಾತನಾಡಿದ ವೇಳೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಮುಂದಿನ ಒಂದು ವರ್ಷದೊಳಗೆ ನಮಾಮಿ ಗಂಗೆ ಯೋಜನೆಯಡಿ ಮತ್ತೆ ಮೂರು ಸಾವಿರ ಕೋಟಿ ರೂಪಾಯಿಗಳನ್ನು ವಿನಿಯೋಗಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಗಂಗಾ ಶುದ್ಧೀಕರಣಕ್ಕಾಗಿ ಕೇಂದ್ರ ಸರ್ಕಾರ ಐದು ವರ್ಷಗಳ ಅವಧಿಗೆ 20 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ ಎಂದಿದ್ದಾರೆ.
ಉತ್ತರಪ್ರದೇಶ, ಉತ್ತರಾಖಂಡ ಸೇರಿದಂತೆ ಐದು ರಾಜ್ಯಗಳಲ್ಲಿ 197 ಘಾಟ್ಗಳನ್ನು ನಿರ್ಮಾಣ ಮಾಡುವ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದೆ ಎಂದಿರುವ ಅವರು, ಗಂಗಾ ಮಾಲಿನ್ಯವನ್ನು ತಡೆಯುವುದು ನಮ್ಮ ಆದ್ಯತೆಯಾಗಿದ್ದು, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.