ನ್ಯೂಯಾರ್ಕ್: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ವತಿಯಿಂದ ಬೃಹತ್ ಯೋಗ ಸಮಾರಂಭವನ್ನು ಆಯೋಜಿಸಲಾಗುತ್ತಿದೆ.
ನ್ಯೂಯಾರ್ಕ್ನ ಟೈಮ್ಸ್ ಸ್ಕೇರ್ನಲ್ಲಿ ಸಮಾರಂಭ ಆಯೋಜಿಸಲಾಗುತ್ತಿದೆ. ಹಲವು ಜಾಗತಿಕ ನಾಯಕರು, ರಾಯಭಾರಿಗಳು ಸೇರಿದಂತೆ ಒಟ್ಟು 30 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಇಲ್ಲಿ ಭಾರತದ ಪುರಾತನ ಕಲೆ ಯೋಗವನ್ನು ಪ್ರದರ್ಶನ ಮಾಡಲಾಗುತ್ತದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕೀ ಮೂನ್ ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ. ಸಾಮಾನ್ಯ ಅಸೆಂಬ್ಲಿ ಅಧ್ಯಕ್ಷ ಸಮ್ ಕುಟೇಸ, ಭಾರತದ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರೂ ಭಾಷಣ ಮಾಡಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಯೋಗದ ಮಹತ್ವದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.