ಬೆಂಗಳೂರು: ಪಿಯು ಫಲಿತಾಂಶದಲ್ಲಿ ಈ ಹಿಂದೆ ಗೊಂದಲ ಸೃಷ್ಠಿಯಾಗಿ ಬಾರೀ ಪ್ರತಿಭಟನೆಗಳು ನಡೆದಿತ್ತು, ಇದೀಗ ಅದರ ಮರು ಮೌಲ್ಯಮಾಪನದಲ್ಲಿ ಮತ್ತೆ ತೊಡಕುಗಳು ಸಂಭವಿಸಿವೆ.
ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಿಯು ಮಂಡಳಿ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಅಂಕಗಳನ್ನು ನಿರೀಕ್ಷಿಸುತ್ತಿದ್ದ ವಿದ್ಯಾರ್ಥಿಗಳು ಮೌಲ್ಯಮಾಪನ ಸರಿಯಾಗಿ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ವ್ಯಯಿಸಿದ ಹಣ ಮತ್ತು ಸಮಯ ವ್ಯರ್ಥವಾಗಿದ್ದರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ಮರು ಮೌಲ್ಯಮಾಪನದ ಅರ್ಜಿಗಳು ಇನ್ನೂ ಬರುತ್ತಿದ್ದು, ಅವುಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನ್ಯಾಯಯುತವಾಗಿ ಮೌಲ್ಯ ಮಾಪನ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.