ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ ಹಲವಾರು ಬಿಜೆಪಿ ಮತ್ತು ವಿಎಚ್ಪಿ ಮುಖಂಡರಿಗೆ ನೋಟಿಸ್ ಜಾರಿಗೊಳಿಸಿದೆ.
ಹಾಜಿ ಮೆಹಮೂದ್ ಅವರು ಹೂಡಿದ್ದ ಪಿಟಿಷನ್ಗೆ ಸಂಬಂಧಿಸಿದಂತೆ ಸುಪ್ರೀಂ ಒಟ್ಟು 21 ಮಂದಿಗೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ ಇತರ 17 ಬಿಜೆಪಿ ಮತ್ತು ವಿಎಚ್ಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ.
1992, ಡಿ.6ರ ಬಾಬ್ರಿ ಮಸೀದಿ ಧ್ವಂಸ ಪಿತೂರಿ ಪ್ರಕರಣದಿಂದ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಹಿರಿಯ ನಾಯಕರನ್ನು ವಜಾ ಮಾಡುವಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಅದೇಶವನ್ನು ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಈ ಬಗ್ಗೆಯೂ ಇಂದು ಸುಪ್ರೀಂ ವಿಚಾರಣೆ ನಡೆಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.