ನವದೆಹಲಿ: ಭಾರತದ ಟೇಬಲ್ ಟೆನ್ನಿಸ್ ತಾರೆ ಮಣಿಕಾ ಬಾತ್ರಾ ಅವರು, ಇಂಟರ್ನ್ಯಾಷನಲ್ ಟೇಬಲ್ ಟೆನ್ನಿಸ್ ಫೆಡರೇಶನ್ ವತಿಯಿಂದ ’ಬ್ರೇಕ್ತ್ರೂ ಟೇಬಲ್ ಟೆನ್ನಿಸ್ ಸ್ಟಾರ್’ ಅವಾರ್ಡ್ನ್ನು ಪಡೆದುಕೊಂಡಿದ್ದಾರೆ.
ದಕ್ಷಿಣಕೊರಿಯಾದ ಇಂಚಿಯಾನ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಾತ್ರಾ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಬಾತ್ರಾ ಅವರು ಈ ವರ್ಷ ಟೇಬಲ್ ಟೆನ್ನಿಸ್ ಕ್ರೀಡೆಯಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ.
ಅವಾರ್ಡ್ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅವರು, ತನಗೆ ಬೆಂಬಲವಿತ್ತ ಭಾರತ ಸರ್ಕಾರ, ಭಾರತ ಟೇಬಲ್ ಟೆನ್ನಿಸ್ ಫೆಡರೇಶನ್ಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
source: www.indiatoday.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.