ನವದೆಹಲಿ: 2014ರ ಅಕ್ಟೋಬರ್ನಲ್ಲಿ ಸ್ವಚ್ಛ ಭಾರತ ಅಭಿಯಾನ ಆರಂಭಗೊಂಡ ಬಳಿಕ ದೇಶದಾದ್ಯಂತ ಇದುವರೆಗೆ ಸುಮಾರು 9 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಈಗಾಗಲೇ 546 ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಿ ಘೋಷಣೆ ಮಾಡಲಾಗಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವೆ ಉಮಾ ಭಾರತಿಯವರು ಲೋಕಸಭೆಗೆ ಈ ಬಗ್ಗೆ ಲಿಖಿತ ಮಾಹಿತಿಯನ್ನು ನೀಡಿದ್ದಾರೆ.
2014ರ ಅಕ್ಟೋಬರ್ 2ರಿಂದ 2018ರ ಡಿಸೆಂಬರ್ 7ರವರೆಗೆ ಸ್ವಚ್ಛ ಭಾರತ ಮಿಶನ್(ಗ್ರಾಮೀಣ್) ಯೋಜನೆಯಡಿ 8,91,096ರ ಮನೆಗಳ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದಿದ್ದಾರೆ.
ಉತ್ತರಪ್ರದೇಶದಲ್ಲಿ ಅತೀಹೆಚ್ಚು ಅಂದರೆ 1,70,73,682 ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ದಿಯೂ ಮತ್ತು ದಾಮನ್ನಲ್ಲಿ ಕಡಿಮೆ ಅಂದರೆ 1,600 ಶೌಚಾಲಯಗಳ ನಿರ್ಮಾಣವಾಗಿದೆ.
ಕಳೆದ ಮೂರು ವರ್ಷಗಳಲ್ಲಿ ದೇಶದ 546 ಜಿಲ್ಲೆಗಳು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಿವೆ ಘೋಷಿಸಲ್ಪಟ್ಟಿವೆ ಎಂದಿದ್ದಾರೆ.
source: www.timesnownews.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.