ನವದೆಹಲಿ; ಪ್ರಧಾನಿ ನರೇಂದ್ರ ಮೋದಿಯವರು ತಂದಿರುವ ಜಿಎಸ್ಟಿ, ನೋಟ್ಬ್ಯಾನ್ನಂತಹ ಹಲವಾರು ಆರ್ಥಿಕ ಸುಧಾರಣಾ ಕ್ರಮಗಳು ಉತ್ತಮವಾದ ಫಲಿತಾಂಶವನ್ನು ನೀಡುತ್ತಿವೆ ಮತ್ತು ದೇಶಕ್ಕೆ ಉಜ್ವಲ ಭವಿಷ್ಯವನ್ನು ಒದಗಿಸಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅಭಿಪ್ರಾಯಿಸಿದ್ದಾರೆ.
ವುಮೆನ್ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ ಅವಾರ್ಡ್ 2018ನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆ ಮತ್ತು ಪುರುಷರಿಗೆ ಸಮಾನವಾದ ಅವಕಾಶಗಳನ್ನು ನೀಡಬೇಕಾದ ಅಗತ್ಯವಿದೆ ಎಂದರು.
ಇಂದು ಮಹಿಳೆ ಎಲ್ಲಾ ವಲಯದಲ್ಲೂ ತಜ್ಞತೆಯನ್ನು ಪಡೆಯುತ್ತಿದ್ದಾಳೆ. ಪ್ರತಿಯೊಬ್ಬ ಮಹಿಳೆಗೂ ಶಿಕ್ಷಣ ದೊರೆಯುವಂತೆ ಮಾಡುವುದು ಅಗತ್ಯ ಎಂದು ಪ್ರತಿಪಾದಿಸಿದರು.
ನೋಟ್ಬ್ಯಾನ್ನನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಅವರು, ‘ಹಣವನ್ನು ಬ್ಯಾಂಕಿಂಗ್ ಸೆಕ್ಟರ್ಗೆ ತರುವುದೇ ಅಪನಗದೀಕರಣದ ಉದ್ದೇಶವಾಗಿತ್ತು. ಈ ಉದ್ದೇಶವನ್ನು ಬಹುವಾಗಿ ಸಾಧಿಸಿದ್ದೇವೆ’ ಎಂದರು.
source: ndtv
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.