ನವದೆಹಲಿ: ಮಾಲ್ಡೀವ್ಸ್ಗೆ ಪ್ರಧಾನಿ ನರೇಂದ್ರ ಮೋದಿಯವರು ಯುಎಸ್ಡಿ 1.4 ಬಿಲಿಯನ್ ಹಣಕಾಸು ನೆರವನ್ನು ಸೋಮವಾರ ಘೋಷಣೆ ಮಾಡಿದ್ದಾರೆ.
ಭಾರತ ಪ್ರವಾಸದಲ್ಲಿರುವ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ, ಮೋದಿ ನೆರವಿನ ಘೋಷಣೆಯನ್ನು ಮಾಡಿದ್ದಾರೆ.
ವೀಸಾ ಒದಗಿಸುವಿಕೆ ಸೇರಿದಂತೆ ಒಟ್ಟು ನಾಲ್ಕು ಒಪ್ಪಂದಗಳಿಗೆ ಭಾರತ ಮತ್ತು ಮಾಲ್ಡೀವ್ಸ್ ಇಂದು ಸಹಿ ಹಾಕಿವೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ’ಸೌಹಾರ್ದ ವಾತಾವರಣದಲ್ಲಿ ನಾವು ಫಲಪ್ರದವಾದ ಮಾತುಕತೆಯನ್ನು ನಡೆಸಿದೆವು. ಬಾಂಧವ್ಯವನ್ನು ಗಟ್ಟಿಗೊಳಿಸುವ ವಾಗ್ದಾನವಿತ್ತೆವು’ ಎಂದಿದ್ದಾರೆ.
ಪರಸ್ಪರರ ಹಿತಾಸಕ್ತಿಗೆ ಮಾರಕವಾದ ಚಟುವಟಿಕೆಗಳು ನಮ್ಮ ನೆಲದಲ್ಲಿ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದರು.
ಸೊಲಿಹ್ ಮಾತನಾಡಿ, ಭಾರತ ನಮ್ಮ ಅತ್ಯಂತ ಆತ್ಮೀಯ ಸ್ನೇಹಿತ ಎಂದು ಬಣ್ಣಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.