ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಸಿದ್ಧ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಡಿ.30ರಂದು ಪ್ರಸಾರವಾಗಲಿದೆ. ಈ ಕಾರ್ಯಕ್ರಮದ ಮೂಲಕ ಪ್ರಧಾನಿಗಳು ತಮ್ಮ ಅನಿಸಿಕೆಗಳನ್ನು ದೇಶ ಮತ್ತು ವಿದೇಶಗಳಲ್ಲಿನ ಭಾರತೀಯರೊಂದಿಗೆ ಹಂಚಿಕೊಳ್ಳುತ್ತಾರೆ ಮತ್ತು ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುತ್ತಾರೆ.
ಪ್ರಧಾನಿ ಸ್ಥಾನಕ್ಕೆ ಏರಿದ ಬಳಿಕ ಪ್ರತಿ ತಿಂಗಳು ಮೋದಿ, ಮನ್ ಕೀ ಬಾತ್ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದಾರೆ. ಈ ಬಾರಿ ಅವರದ್ದು 51ನೇ ಮನ್ ಕೀ ಬಾತ್ ಕಾರ್ಯಕ್ರಮವಾಗಿದೆ.
ನರೇಂದ್ರ ಮೋದಿ ಅಪ್ಲಿಕೇಶನ್ ಮತ್ತು ಮೈಗೌ ಓಪನ್ ಫೋರಂ ಮೂಲಕ ಜನರು ತಮ್ಮ ಸಲಹೆ ಸೂಚನೆಗಳನ್ನು ಈ ಕಾರ್ಯಕ್ರಮಕ್ಕಾಗಿ ಕಳುಹಿಸಿಕೊಡಬಹುದಾಗಿದೆ.
1800-11-7800 ಟೋಲ್ ಫ್ರೀ ನಂಬರ್ಗೆ ಕರೆಯನ್ನು ಮಾಡಿ, ಪ್ರಧಾನಿಗಳಿಗೆ ತಮ್ಮ ಸಂದೇಶವನ್ನು ರೆಕಾರ್ಡ್ ಮಾಡುವ ಆಯ್ಕೆಯೂ ಜನರಿಗಿದೆ.
source: www.newsonair.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.