ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ತಮ್ಮ 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ರಾಜಕೀಯ ಎದುರಾಳಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರೂ ತುಂಬು ಹೃದಯದಿಂದ ಕಾಂಗ್ರೆಸ್ ಯುವರಾಜನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟರ್ ಮೂಲಕ ರಾಹುಲ್ಗೆ ಶುಭಾಶಯ ಕೋರಿರುವ ಮೋದಿ, ಅವರ ಉತ್ತಮ ಆರೋಗ್ಯ ಮತ್ತು ಧೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ರಾಹುಲ್ ಟ್ವಿಟರ್ ಮೂಲಕವೇ ಮೋದಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ರಾಜಕೀಯ ವಿರೋಧಿಗಳೇ ಇರಲಿ, ಟೀಕಾಕಾರರೇ ಇರಲಿ ಎಲ್ಲಾ ವೈಮನಸ್ಸುಗಳನ್ನು ಮರೆತು ಅವರಿಗೆ ವೈಯಕ್ತಿಕವಾಗಿ ಶುಭಾಶಯಗಳನ್ನು ತಿಳಿಸುವ ಪ್ರಧಾನಿ ಮೋದಿಯವರ ಗುಣವನ್ನು ಮಚ್ಚಲೇ ಬೇಕು.
ಹಲವು ವರ್ಷಗಳ ಬಳಿಕ ರಾಹುಲ್ ಅವರು ತಮ್ಮ ಜನ್ಮದಿನದಂದು ರಾಷ್ಟ್ರ ರಾಜಧಾನಿಯಲ್ಲಿ ಇರಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅಭಿಮಾನಿಗಳು ರಾಹುಲ್ ನಿವಾಸ 12 ತುಘಲಕ್ ಲೇನ್ ಹೊರಭಾಗದಲ್ಲಿ ೪೫ ಕೆಜಿ ತೂಕದ ಕೇಕನ್ನು ಕಟ್ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.