ಬೆಂಗಳೂರು: ಎಪ್ರಿಲ್ 3ರಿಂದ 5ರವರೆಗೆ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಬಂದೋಬಸ್ತ್ಗಳನ್ನು ಏರ್ಪಡಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು 1500 ಪೊಲೀಸರನ್ನು ಕರೆತರುವ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆದಿದೆ ಎಂದು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.
ಮೋದಿ ಎ.2ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಅಶೋಕ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮೋದಿಯೊಂದಿಗೆ ಎಲ್.ಕೆ.ಅಡ್ವಾಣಿ, ಅಮಿತ್ ಷಾ ಸೇರಿದಂತೆ ಕೇಂದ್ರದ ಇತರ 10 ಸಚಿವರುಗಳು ಆಗಮಿಸಲಿದ್ದಾರೆ. ಅಲ್ಲದೇ 300 ಇತರ ಗಣ್ಯರು ಆಗಮಿಸಲಿದ್ದಾರೆ. ಇವರೆಲ್ಲರ ಭದ್ರತೆಯ ಸವಾಲು ಬೆಂಗಳೂರು ಪೊಲೀಸರ ಮೇಲಿದೆ.
ಇನ್ನೊಂದೆಡೆ ಸ್ವಚ್ಛ ಭಾರತ ಕನಸನ್ನು ಹೊತ್ತಿರುವ ಮೋದಿಯವರು ಬೆಂಗಳೂರಿಗೆ ಬರುತ್ತಿರುವ ಹಿನ್ನಲೆಯಲ್ಲಿ ಅನವಶ್ಯಕವಾಗಿ ಹಾಕಲಾಗಿರುವ ಬ್ಯಾನರ್, ಬಟ್ಟಿಂಗ್ಸ್ಗಳನ್ನು ತೆರವುಗೊಳಿಸಬೇಕು ಎಂದು ಉಪ ಲೋಕಾಯುಕ್ತ ಸುಭಾಷ್ ಬಿ ಅವರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.
ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗಲಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.