ನವದೆಹಲಿ: ಸ್ವಾಮಿ ವಿವೇಕಾನಂದರ ಕನಸಿನಂತೆ ದೇಶವನ್ನು ನಿರ್ಮಾಣ ಮಾಡುವಲ್ಲಿ ಕೈಜೋಡಿಸಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದೇಶದ ಯುವಕರಿಗೆ ಕರೆ ನೀಡಿದ್ದಾರೆ.
ಲಕ್ನೋದಲ್ಲಿ ಜರುಗಿದ ಯುವ ಕುಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಯುಜನತೆ ಮಾತ್ರ ದೇಶವನ್ನು ವಿಶ್ವಗುರು ಮಾಡಬಲ್ಲರು ಎಂದಿದ್ದಾರೆ.
‘ನಮ್ಮ ಸಾಂಸ್ಕೃತಿಕ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ಅದಕ್ಕೆ ನಾವು ಬದ್ಧರಾಗಿರಬೇಕು’ ಎಂದಿದ್ದಾರೆ.
2019ರಲ್ಲಿ ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಮಹಾಕುಂಭಮೇಳವನ್ನು ಪ್ರಚಾರಪಡಿಸುವ ಸಲುವಾಗಿ ಲಕ್ನೋದಲ್ಲಿ ಯುವ ಕುಂಭವನ್ನು ಆಯೋಜನೆಗೊಳಿಸಲಾಗಿತ್ತು.
source: ANI
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.