ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನೆರೆಯ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯ ವೃದ್ಧಿಯಾಗಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ಥಾನದೊಂದಿಗೆ ಬಾಂಧವ್ಯ ವೃದ್ಧಿಸಲು ಭಾರತ ಆಸಕ್ತಿ ತೋರಿಸುತ್ತಿದೆ. ಚೀನಾದೊಂದಿಗಿನ ಸ್ನೇಹವನ್ನು ಮೋದಿ ಉತ್ತಮಪಡಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಗಡಿ ವಿವಾದ ಬಗೆ ಹರಿಯದೇ ಇದ್ದರೂ, ಗಡಿಯಲ್ಲಿ ಹಿಂದೆ ಇದ್ದ ಉದ್ವಿಗ್ನ ಪರಿಸ್ಥಿತಿ ಈಗ ಇಲ್ಲ ಎಂದು ಅವರು ಹೇಳಿದ್ದಾರೆ.
ಚೀನಾದೊಂದಿಗಿನ ಆರ್ಥಿಕ ಸಂಬಂಧ ಸಹಜ ಸ್ಥಿತಿಗೆ ಮರಳಿದೆ, ಚೀನಾದಲ್ಲಿ ಮೋದಿಗೆ ಇತ್ತೀಚಿಗೆ ಅದ್ದೂರಿ ಸ್ವಾಗತವೇ ದೊರೆತಿದೆ ಎಂದ ಅವರು, ಪಾಕಿಸ್ಥಾನದೊಂದಿಗೂ ಬಾಂಧವ್ಯ ವೃದ್ಧಿಗೆ ನಾವು ಉತ್ಸುಹುಕರಾಗಿದ್ದೇವೆ ಎಂದರು.
ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ಮೋದಿ ಪ್ರಮಾಣವಚನ ಸ್ವೀಕರಿಸುವಾಗಲೇ ನೆರೆಯ ರಾಷ್ಟ್ರಗಳೊಂದಿಗಿನ ಬಾಂಧವ್ಯ ವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದರು. ನಾಯಕರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದರು. ಇದು ಸಕಾರಾತ್ಮಕ ಪ್ರಭಾವ ಬೀರಿದೆ ಎಂದು ಅವರು ಅಭಿಪ್ರಾಯಪಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.