ಲಕ್ನೋ: ಅನಾಥವಾಗಿ ಬಿದಿಯಲ್ಲಿ ಅಡ್ಡಾಡುವ ದನಗಳಿಗೆ ಸೂಕ್ತವಾದ ಆಶ್ರಯವನ್ನು ಕಲ್ಪಿಸುವಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ತಮ್ಮ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೇ, ಮೇವಿನ ಭೂಮಿಗಳನ್ನು ಅತಿಕ್ರಮಣ ಮಾಡುವವರ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಸೂಚಿಸಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯೋಗಿ, ಬೀದಿ ದನಗಳಿಗೆ ಉತ್ತಮ ಆಶ್ರಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳುವ ಸಲುವಾಗಿ ಸಮಿತಿಗಳನ್ನು ರಚನೆ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೇ, ಈ ಬಗೆಗೆ ಶಿಫಾರಸ್ಸುಗಳನ್ನು ಒಂದು ವಾರದೊಳಗೆ ಸಲ್ಲಿಕೆ ಮಾಡುವಂತೆ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ ಪಾಂಡೆಯವರಿಗೆ ಸೂಚಿಸಿದ್ದಾರೆ..
ಅತಿಕ್ರಮಣಕ್ಕೆ ಒಳಗಾಗಿರುವ ಗೋವುಗಳ ಮೇವಿನ ಭೂಮಿಯನ್ನು ಶೀಘ್ರದಲ್ಲೇ ವಾಪಾಸ್ ಪಡೆದುಕೊಳ್ಳಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮಟ್ಟದಲ್ಲಿ 750 ಗೋ ಶಾಲೆಗಳನ್ನು ನಿರ್ಮಾಣ ಮಾಡಬೇಕು, ಅಲ್ಲಿಗೆ ಸಮರ್ಪಕವಾಗಿ ನೀರು ಮತ್ತು ಮೇವುಗಳನ್ನು ಪೂರೈಕೆ ಮಾಡಬೇಕು ಎಂದಿದ್ದಾರೆ.
16 ಮಹಾನಗರಪಾಲಿಕೆಗಳಿಗೆ ಗೋಶಾಲೆಗಳನ್ನು ನಿರ್ಮಾಣ ಮಾಡುವ ಸಲುವಾಗಿ ಸರ್ಕಾರ ರೂ.10 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
source: NDTV
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.