ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಸಲುವಾಗಿ ಉಚಿತ ಯೋಗ ಶಿಬಿರ ಜೂನ್ 21ರಂದು ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಹಾಸ್ಟೆಲ್ನ ಎ.ಬಿ.ಶೆಟ್ಟಿ ಸಭಾಂಗಣದ ಹೊರಭಾಗ ಹಾಗೂ ವೆಂಕಪ್ಪ ಪೂಂಜ ಸಭಾ ಭವನದಲ್ಲಿ ಜರುಗಲಿದೆ.
ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್ ಸಹಭಾಗಿತ್ವದಲ್ಲಿ ಯೋಗ ಶಿಕ್ಷಕ ಎಂ.ಜಗದೀಶ್ ಶೆಟ್ಟಿ ಹಾಗೂ ಬಳಗದವರಿಂದ ಯೋಗ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಆಸನ, ಪ್ರಾಣಾಯಾಮ, ಸೂರ್ಯ ನಮಸ್ಕಾರ, ಧ್ಯಾನ, ಬೊಜ್ಜು ಕರಗಿಸುವ ಬಗ್ಗೆ, ಮಧುಮೇಹ, ಮತ್ತು ಆಹಾರ ಸೇವನೆಯ ಕುರಿತು ವಿಶೇಷ ಮಾಹಿತಿ ನೀಡಲಾಗುವುದು. ಯೋಗ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ಕುಮಾರ್ ರೈ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.