ಮಂಗಳೂರು: ಬಜೆಟ್ನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಫ್ಟನ್ ಗಣೇಶ್ ಕಾರ್ಣಿಕ್ರವರು ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದರು.
ಪಶ್ಚಿಮ ವಾಹಿನಿ ಯೋಜನೆ: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ, ಕುಸಿಯುತ್ತಿರುವ ಅಂತರ್ಜಲ ಹಾಗೂ ಸಮುದ್ರ ಸೇರುವ ನದಿಗಳಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುವ ಉಪ್ಪು ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಪಶ್ಚಿಮ ವಾಹಿನಿ ಯೋಜನೆಯನ್ನು ಶೀಘ್ರವಾಗಿ ಪ್ರಾರಂಭಿಸಲು ಒತ್ತಾಯಿಸಿದ್ದು ಯೋಜನೆಯನ್ನು ಪರಿಗಣಿಸುವುದಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು.
ಕುದುರೆಮುಖ ಸಂಸ್ಥೆ: ಕರಾವಳಿ ಕರ್ನಾಟಕದ ಪ್ರತಿಷ್ಠಿತ ಕಂಪನಿಯಾದ ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ ರಮಣದುರ್ಗ ಗಣಿಯನ್ನು ಸ್ವಂತ ಉಪಯೋಗಕ್ಕಾಗಿ ಗುತ್ತಿಗೆ ನೀಡುವ ಮತ್ತು ಕುದುರೆಮುಖದಲ್ಲಿರುವ ಟೌನ್ಶಿಪ್ನ ಸೌಲಭ್ಯಗಳನ್ನು ಉಪಯೋಗ ಮಾಡುವುದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಶೀಘ್ರವಾಗಿ ಸಂಬಂಧಪಟ್ಟವರ ಸಭೆ ಕರೆದು ನಿರ್ಣಯಿಸುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ತೊಕ್ಕೊಟ್ಟು – ಮುಡಿಪು ಚತುಷ್ಪಥೀಕರಣ:
ಉಳ್ಳಾಲದ ತೊಕ್ಕೊಟ್ಟ್ಟಿನಿಂದ ಮುಡಿಪುವಿನವರೆಗೆ ಇರುವ ಸಂಪರ್ಕ ರಸ್ತೆಯನ್ನು ಅಲ್ಲಿರುವ ಇನ್ಫೋಸಿಸ್, ಮಂಗಳೂರು ವಿಶ್ವವಿದ್ಯಾಲಯ, ನಿಟ್ಟೆ ಯೂನಿವರ್ಸಿಟಿ, ಯುನಪೊಯ ಯೂನಿವರ್ಸಿಟಿ, ಫಾದರ್ ಮುಲ್ಲರ್ಸ್, ಮುಂತಾದ ಶೈಕ್ಷಣಿಕ ಸಂಸ್ಥೆಗಳು ಮತ್ತು ಅವರ ಅವಶ್ಯಕತೆಗೆ ಅನುಗುಣವಾಗಿ ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲು ಲೋಕೋಪಯೋಗಿ ಇಲಾಖೆಗೆ ಸೂಕ್ತ ಸೂಚನೆ ನೀಡುವುದಾಗಿ ತಿಳಿಸಿದರು.
ಮಂಗಳೂರು ರನ್ವೇ ವಿಸ್ತರಣೆ
ಮಂಗಳೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಅಗತ್ಯವಿರುವ ಜಮೀನನ್ನು ಸ್ವಾಧೀನಪಡಿಸಲು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.