ನವದೆಹಲಿ: ಸ್ವತಂತ್ರ ರಾಜ್ಯ ಖಾತೆಯನ್ನು ಹೊಂದಿರುವ ಎಲ್ಲಾ ಕೇಂದ್ರ ಸಚಿವರುಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ತಾವು ಇದುವರೆಗೆ ಮಾಡಿದ ಕೆಲಸ ಕಾರ್ಯಗಳನ್ನು ಮತ್ತು ತಮ್ಮ ಸಚಿವಾಲಯಗಳು ನಡೆಸಿದ ಅಭಿವೃದ್ಧಿಯ ವರದಿಯನ್ನು ಒಪ್ಪಿಸಿದರು.
ಪ್ರಧಾನಿ ನಿವಾಸ 7 ಆರ್ಸಿಆರ್ನಲ್ಲಿ ನಡೆದ ಸಭೆಯಲ್ಲಿ ಸಚಿವರುಗಳು ತಮ್ಮ ವರದಿಯನ್ನು ಮೋದಿಗೆ ನೀಡಿದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೂ ಉಪಸ್ಥಿತರಿದ್ದರು.
ಮೇ 20ಕ್ಕೆ ಮೋದಿ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷವಾಗಲಿದೆ. ಈ ಹಿನ್ನಲೆಯಲ್ಲಿ ಈ ಸಭೆಯನ್ನು ಇಂದು ಕರೆಯಲಾಗಿತ್ತು. ಈ ವೇಳೆ ರೈಲುಗಳು ತಡವಾಗಿ ಆಗಮಿಸುತ್ತಿರುವುದಕ್ಕೆ ರೈಲ್ವೇ ಸಚಿವ ಸುರೇಶ್ ಪ್ರಭು ಅವರನ್ನು ಮೋದಿ ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.
ಎಲ್ಲಾ ಸಚಿವಾಲಯಗಳ ಜವಾಬ್ದಾರಿಯನ್ನು ತಾನು ವೈಯಕ್ತಿಕವಾಗಿ ನೋಡಿಕೊಳ್ಳುತ್ತೇನೆ ಎಂದು ಮೋದಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಎಲ್ಲಾ ಸಚಿವಾಲಯಗಳ ಪ್ರಗತಿಯ ವರದಿಯನ್ನು ತನ್ನ ಮುಂದಿಡುವಂತೆ ಮೋದಿ ಸಚಿವರುಗಳಿಗೆ ಸೂಚಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.