ಪುತ್ತೂರು : ವಿಶ್ವಯೋಗ ದಿನಾಚರಣೆಯ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 20-6-2015 ನೇ ಶನಿವಾರದಂದು ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಜೊತೆಗೆ ಸಭಾ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿಕೆಯ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಗಿರೀಶ್ ಮಳಿ, ನ್ಯಾಯವಾದಿ, ಪುತ್ತೂರು ಇವರು ಇಂದಿನ ದಿನಗಳಲ್ಲಿ ಯೋಗದ ಮಹತ್ವ ಹಾಗೂ ಔಚಿತ್ಯತೆಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ವಿಶ್ವಯೋಗ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರಾಮ ನಾಕ್ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತ ಇವರು ಉಪಸ್ಥಿತರಿದ್ದರು. ಶ್ರೀ ಮಹೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. ಕು| ರೇಷ್ಮಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶ್ರೀ ಗಣೇಶ್ ಏತಡ್ಕ ವಂದಿಸಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ , ಶ್ರೀಮತಿ ನಮಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರ ಸಹಕಾರದೊಂದಿಗೆ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಯೋಗ ಪ್ರಾತ್ಯಕ್ಷಿಕೆ ಯನ್ನು ನಡೆಸಲಾಯಿತು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ಯೋಗ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿಯಾದ ಹರಿಣಾಕ್ಷಿ ಹಾಗೂ ಶಾಲಾ ಯೋಗ ಪಟು ವಿದ್ಯಾರ್ಥಿಗಳಿಂದ ಸೂರ್ಯನಮಸ್ಕಾರ, ಸರಳ ವ್ಯಾಯಾಮ, ಪ್ರಾಣಾಯಾಮಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. 5 ರಿಂದ 10 ನೇ ತರಗತಿಯ ಮಕ್ಕಳಿಗೆ ‘ಯೋಗ ಹಾಗೂ ಆರೋಗ್ಯ’ ಮತ್ತು’ಸರಳ ಕಲಿಕೆ -ಯೋಗ’ ಎಂಬ ವಿಷಯಗಳ ಬಗ್ಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.