ಪುತ್ತೂರು : ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿಯ ಮಾಹಿತಿಯನ್ನು ಪೋಷಕರು ನಿರಂತರವಾಗಿ ಕಾಲೇಜಿನಿಂದ ಸಂಗ್ರಹಿಸಬೇಕು ಇದರಿಂದ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಅವಲೋಕಿಸುವುದು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾಲೇಜಿನ ಮತ್ತು ಪೋಷಕರ ನಡುವೆ ಸಂಪರ್ಕವನ್ನು ಇರಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಮತ್ತು ಕಾಲೇಜಿನ ಏಳಿಗೆಗೆ ಸಹಕಾರಿಯಾಗುತ್ತದೆ ಎಂದು ನುಡಿದರು.
ಪ್ರಾಂಶುಪಾಲ ಡಾ.ಲಿಂಗನಗೌಡ ಕುಲಕರ್ಣಿಯವರು ಪೋಷಕ ಸಂಪರ್ಕ ಕೇಂದ್ರದ ಮುಂದಿನ ಯೋಜನೆಗಳ ಮಾಹಿತಿಯನ್ನು ನೀಡುತ್ತಾ, ಹೆತ್ತವರೊಡನೆ ಮುಕ್ತ ಸಂವಾದವನ್ನು ನಡೆಸಿದರು. ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರಶಾಂತ ರಾವ್ ಸಂಪರ್ಕ ಕೇಂದ್ರದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ಸಂಯೋಜಕ ವಿಜಯ್ ವಿ ಎಸ್ ಸ್ವಾಗತಿಸಿದರು, ಉಪನ್ಯಾಸಕಿ ಮಾಧವಿ ಪೈ ವಂದಿಸಿದರು. ಶ್ರೀಮತಿ ಲತಾ ಶೆಟ್ಟಿ ಮತ್ತು ಹರಿಪ್ರಸಾದ್ ಡಿ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಪೋಷಕರು ಇದರಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.