ನವದೆಹಲಿ: ಭಾರತೀಯ ಸೇನೆಯ ಏಕೈಕ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಜನರಲ್ ಕಾರಿಯಪ್ಪನವರ 120ನೇ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಇಡೀ ದೇಶ ಈ ವೀರ ಕನ್ನಡಿಗನಿಗೆ ಗೌರವ ನಮನಗಳನ್ನು ಸಲ್ಲಿಸುತ್ತಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೆ.ಎಂ ಕಾರಿಯಪ್ಪನವರ ಜನ್ಮದಿನಕ್ಕೆ ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ಟ್ವಿಟ್ ಮಾಡಿ ಶುಭ ಕೋರಿದ್ದು ವಿಶೇಷ.
”ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಜನ್ಮದಿನದ ಸ್ಮರಣೆ. ಕರ್ನಾಟಕದ ಕೊಡಗಿನ ಹಿರಿಮೆಯ ಪುತ್ರ ಹಾಗೂ ಅದಕ್ಕೂ ಮಿಗಿಲಾಗಿ ಭಾರತದ ಮಹಾನ್ ಪುತ್ರರಾದ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರು ನಮ್ಮ ಅತ್ತ್ಯುತ್ತಮ ಸೇನಾ ದಂಡನಾಯಕರಲ್ಲಿ ಒಬ್ಬರು ಹಾಗೂ ಅತ್ಯಂತ ನೆಚ್ಚಿನ ರಾಷ್ಟ್ರ ನಾಯಕರಾಗಿ ಉಳಿದಿರುತ್ತಾರೆ’’ಎಂದು ಟ್ವಿಟ್ ಮಾಡಿದ್ದಾರೆ.
ಕಾರಿಯಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ, ಅವರು ಹುಟ್ಟಿದ ಮನೆ ಹಾಗೂ ಅವರ ಸಮಾಧಿ ಇರುವ ಕೊಡಗು ನಗರದ ರೋಶನಾರ ಬಳಿ ಪೂಜೆ ಸಲ್ಲಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ವೀರ ಸೇನಾನಿಯನ್ನು ಸ್ಮರಿಸಿದರು.
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ ಆಯಿಂಗಡ ಪುಟ್ಟ ನ ದಿನತ್ ರ ಒರ್ ಸ್ಮರಣೆ. ಕೊಡ ಗ್ ರ , ಕರ್ನಾಟಕ ತ್ ರ, ಆಂಡ ಮೀದ ಭಾರತ ದೇಶ ತ್ ರ ಕೊದಿಮೋಂವ ನಾನ ಇಯಂಗ ನಂಗಡ ಕೇಳಿ ಪೋನ ಮಹದಂಡ ನಾಯಕ ಅಲ್ಲತೆ ಪ್ರೀತಿರ ರಾಷ್ಟ್ರನಾಯಕ. ಇಯಂಗಡ ದೇಶ ಸೇವೆನ ನಂಗ ಎಕ್ಕಲೂ ಗೇ ನ ಬೆಚ್ಚೋ ವ. – ರಾಷ್ಟ್ರಪತಿ ಕೋವಿಂದ್
— President of India (@rashtrapatibhvn) January 28, 2019
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಜನ್ಮದಿನದ ಸ್ಮರಣೆ. ಕರ್ನಾಟಕದ ಕೊಡಗಿನ ಹಿರಿಮೆಯ ಪುತ್ರ ಹಾಗೂ ಅದಕ್ಕೂ ಮಿಗಿಲಾಗಿ ಭಾರತದ ಮಹಾನ್ ಪುತ್ರರಾದ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರು ನಮ್ಮ ಅತ್ತ್ಯುತ್ತಮ ಸೇನಾ ದಂಡನಾಯಕರಲ್ಲಿ ಒಬ್ಬರು ಹಾಗೂ ಅತ್ಯಂತ ನೆಚ್ಚಿನ ರಾಷ್ಟ್ರ ನಾಯಕರಾಗಿ ಉಳಿದಿರುತ್ತಾರೆ – ರಾಷ್ಟ್ರಪತಿ ಕೋವಿಂದ್
— President of India (@rashtrapatibhvn) January 28, 2019
Being handed the Field Marshal’s baton (bottom photo). Only a Field Marshal/five star general carries a baton and salutes with his baton. pic.twitter.com/CJFdXdEpiN
— President of India (@rashtrapatibhvn) January 28, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.