ಮಂಗಳೂರು : ಬೆಂಗಳೂರಿನ ಶ್ರೀ ಶ್ರೀ ಆಯುರ್ವೇದಿಕ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ, 2 ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಮಣಿಕಂಠ ಕಳಸ ಇವರು ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಕರ್ನಾಟಕ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು, ಮಾನ್ಯ ಪ್ರಧಾನ ಮಂತ್ರಿಗಳಾದ ಮೋದಿಜಿಯವರೊಂದಿಗೆ 27 ನೇ ತಾರೀಕಿನಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನವರಾದ ಮಣಿಕಂಠ ಇವರು, ಚಂದ್ರೇಗೌಡ ಮತ್ತು ಪಾರ್ವತಿ ದಂಪತಿಗಳ ಪುತ್ರನಾಗಿದ್ದು, ತನ್ನ ಪದವಿಪೂರ್ವ ವ್ಯಾಸಾಂಗದ ಸಮಯದಲ್ಲಿ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿ 2 ಬಾರಿ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದು ಸಭಾಪತಿಗಳಾದ ಡಿ.ಎಚ್ ಶಂಕರಮೂರ್ತಿ ಹಾಗೂ ಅಂದಿನ ಶಿಕ್ಷಣ ಸಚಿವರಿಂದ ಅಭಿನಂದನೆಗೆ ಪಾತ್ರರಾಗಿದ್ದರು. ಪ್ರಸ್ತುತ SDM ಕಾನೂನು ಕಾಲೇಜಿನಲ್ಲಿ ಕಾನೂನು ವ್ಯಾಸಾಂಗ ಮಾಡುತ್ತಿದ್ದು, ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಸಹ ಕಾರ್ಯದರ್ಶಿಯಾಗಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.