ಕಲ್ಲಡ್ಕ : ಪ್ರತಿ ಮನೆ-ಮನೆಗಳಲ್ಲಿಯೂ ನಿತ್ಯ ಯೋಗ ನಡೆಯಬೇಕು ಯೋಗದಿಂದ ದೇಹ, ಮನಸ್ಸು ಶುದ್ಧಿಯಾಗುವುದಲ್ಲದೇ ನಿರೋಗಿಗಳಾಗಿ ಬದುಕಬಹುದು. ತಾನು ಶಾಂತವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದಕ್ಕೆ ಯೋಗ ಸಹಕಾರಿಯಾಗುವುದು. ಓಂಕಾರದೊಂದಿಗೆ ಮನೆಯಲ್ಲಿ ನಿತ್ಯ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಸಿದರೆ ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ಡಾ|ಪ್ರಭಾಕರ ಭಟ್ ಹೇಳಿದರು.
ಅವರು ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಪ್ರೌಢಶಾಲಾ ವಿದ್ಯಾರ್ಥಿಗಳ ಪಾಲಕರ ಸಮಾವೇಶದಲ್ಲಿ ಯೋಗದ ಮಹತ್ವವನ್ನು ತಿಳಿಸಿದರು. ಮೈಥಿಲಿ ಪರ್ಕಳ ಮತ್ತು ಮಹಾಬಲ ಸರಳ ಯೋಗ ವ್ಯಾಯಾಮಗಳನ್ನು, ಪ್ರಾಣಾಯಾಮಗಳನ್ನು ಹೇಳಿಕೊಟ್ಟರು.
ವೇದಿಕೆಯಲ್ಲಿ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ವಸಂತ ಮಾಧವ ಉಪಸ್ಥಿತರಿದ್ದರು. ಶಾರೀರಿಕ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ಸ್ವಾಗತಿಸಿ, ನಿರೂಪಿಸಿದರು. ಗಾಯತ್ರಿ ಮಾತಾಜಿ ವಂದಿಸಿದರು. ೫೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.