ಸುಳ್ಯ : ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಯೋಗ ಸಪ್ತಾಹ – ೨೦೧೫’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು.
ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ ಇವರಿಂದ ಯೋಗಾಸನದ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹ ಶಾಲಾ ಅಧ್ಯಕ್ಷರಾದ ಡಾ|ಚಂದ್ರಶೇಖರ ದಾಮ್ಲೆಯವರು ವಿದ್ಯಾರ್ಥಿಗಳಿಗೆ ಯೋಗಾಸನದ ಪೋಸ್ಟರ್ನ್ನು ವಿತರಿಸಿದರು.
ವೇದಿಕೆಯಲ್ಲಿ ಜೆ ಸಿ ಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ಭೀಮರಾವ್ ವಾಷ್ಠರ್, ನಿಕಟಪೂರ್ವಾಧ್ಯಕ್ಷ ಅಶೋಕ್ ಚೂಂತಾರು ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.