ಪುತ್ತೂರು : ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆ ಪುತ್ತೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ಮತ್ತು ತುರ್ತು ಪರಿಸ್ಥಿತಿ ಸನ್ನದ್ದತೆ ಕುರಿತು 2 ದಿನದ ತರಬೇತಿ ಕಾರ್ಯಕ್ರಮವು ರೊಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರುನಲ್ಲಿ ನಡೆಯಿತು .
ಕಾರ್ಯಕ್ರಮವನ್ನು ಶ್ರೀ ಪ್ರಾನ್ಸಿಸ್ ಡಿ’ಸೋಜ (ಎ. ಜಿ . ಯಂ ಆಡಳಿತ ವಿಭಾಗ ) ಉದ್ಘಾಟಿಸಿ ಕಾರ್ಯಕ್ರಮದ ಅಗತ್ಯತೆಯ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಷ್ಟ್ರಿಯ ವಿಪತ್ತು ನಿರ್ವಹಣಾ ಮತ್ತು ದಕ್ಷಿಣ ಏಶ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಾದ ಡಾ. V L S ಕುಮಾರ್ ಇವರು ತರಬೇತಿ ಕಾರ್ಯಕ್ರಮವನ್ನು ಪ್ರಾತ್ಯಕ್ಷತೆಯ ಮೂಲಕ ನಡೆಸಿಕೂಟ್ಟರು.
ಪ್ರಥಮ ಚಿಕಿತ್ಸೆ ಮತ್ತು ತುರ್ತು ಪರಿಸ್ಥಿತಿ ಸನ್ನದ್ದತೆ ಕುರಿತು ಪ್ರಾತಕ್ಷತೆಯನ್ನು ಡಾ. V L S ಕುಮಾರ್, ಅಗ್ನಿಶಾಮಕ ದಳ ಮಂಗಳೂರು ಹಾಗು ಪುತ್ತೂರು ಇವರ ಮುಂದಾಳುತ್ವದಲ್ಲಿ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯಲ್ಲಿ ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.