ಮಂಗಳೂರು : ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿಯವರ ಆಪ್ತ ಹನುಮೇಶ ನಾಯಕ್ ಎಂಬಾತ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಸಚಿವರಿಂದ ಆರೋಪಿಯ ರಕ್ಷಣೆ, ಪ್ರಕರಣದಲ್ಲಿ ಸಚಿವರ ಪಾತ್ರವನ್ನು ಖಂಡಿಸಿ, ಸಚಿವರ ರಾಜೀನಾಮೆಗೆ ಒತ್ತಾಯಿಸಿ ಹಾಗೂ ರಾಜ್ಯ ಸರಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜೂನ್ 27ರ ಶನಿವಾರ ಬೆಳಿಗ್ಗೆ ಗಂಟೆ 10-30ಕ್ಕೆ ಮಂಗಳೂರು, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ವಿ.ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರತಾಪಸಿಂಹ ನಾಯಕ್ ಪತಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.