ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಎಪ್ರಿಲ್ 13 ರಂದು ಸಂಜೆ 4 ಗಂಟೆಗೆ ಮೋದಿಯವರು ಕೇಂದ್ರ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೃಹತ್ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಲಕ್ಷಾಂತರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇರುವುದರಿಂದ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.
ಸಮಾವೇಶ ನಡೆಯುವ ಆವರಣದೊಳಗೆ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಬಿಗಿ ಬಂದೋಬಸ್ತ್ ಅನ್ನು ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪೊಲೀಸರಿಗೆ ಈ ನಿಟ್ಟಿನಲ್ಲಿ ತರಬೇತಿಯನ್ನೂ ನೀಡಲಾಗುತ್ತಿದೆ.
‘ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಹಲವಾರು ಕಡೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಕಳೆದ ಒಂದು ವಾರಗಳಿಂದ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಸಮಾವೇಶದ ಆವರಣವನ್ನು ಹತ್ತಿರದಿಂದ ಪರೀಕ್ಷಿಸಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಹೇಳಿದ್ದಾರೆ.
5 SPಗಳನ್ನು ಮತ್ತು DCP ಗಳನ್ನು, 10 DySP ಮತ್ತು ACP ಗಳನ್ನು, 36 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು, 65 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳನ್ನು, 147 ಸಹಾಯಕ ಸಬ್ ಇನ್ಸ್ಪೆಕ್ಟರ್ಗಳನ್ನು , 1207 ಹೆಡ್ ಕಾನ್ಸ್ಟೇಬಲ್ಸ್ ಮತ್ತು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಭದ್ರತೆಯಾಗಿ ನಿಯೋಜಿಸಲಾಗಿದೆ. ಒಟ್ಟು 1472 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಮತ್ತು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬಾಂಬ್-ಪತ್ತೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.