ನವದೆಹಲಿ : ಶ್ರೀಮಂತ ಹಿಂದೂ ನಾಗರಿಕತೆಯನ್ನು ಭಯೋತ್ಪಾದಕತೆ ಎಂದು ಬಿಂಬಿಸಲು ಹೊರಟವರಿಗೆ ಉತ್ತರವಾಗಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಾಧ್ವಿ ಪ್ರಗ್ಯಾ ಅವರು ಮಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿ ಜೈಲು ಪಾಲಾಗಿದ್ದರು. ಆದರೆ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದೀಗ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಇದೀಗ ಅವರು ಬಿಜೆಪಿ ಅಭ್ಯರ್ಥಿಯಾಗಿ ಭೋಪಾಲ್ನಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರನ್ನು ಇವರು ಎದುರಿಸಲಿದ್ದಾರೆ.
“ಹಿಂದೂಗಳನ್ನು ಭಯೋತ್ಪಾದಕರು ಎಂದು ಬಿಂಬಿಸಲು ಹೊರಟವರಿಗೆ ಸಾಂಕೇತಿಕ ಉತ್ತರವಾಗಿ ಪ್ರಗ್ಯಾ ಅವರನ್ನು ಕಣಕ್ಕಿಳಿಸಲಾಗುತ್ತಿದೆ, ಈ ಸಾಂಕೇತಿಕ ಉತ್ತರ ಕಾಂಗ್ರೆಸ್ ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸಲಿದೆ” ಎಂದು ಮೋದಿ ಹೇಳಿದ್ದಾರೆ.
ಸಂಜೋತಾ ಎಕ್ಸ್ಪ್ರೆಸ್ ಸ್ಪೋಟ ಮತ್ತು ನ್ಯಾಯಾಧೀಶ ಬಿ. ಎಚ್. ಲೋಧ ಅವರ ಸಾವು ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸುಳ್ಳು ಕಥೆಗಳನ್ನು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರುಗಳಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕೂಡ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೂ ಅವರು ಚುನಾವಣಾ ಕಣಕ್ಕಿಳಿದಿದ್ದಾರೆ. ಹಾಗಿರುವಾಗ, ಜಾಮೀನಿನ ಮೇಲೆ ಇರುವ ಪ್ರಗ್ಯಾ ಸಿಂಗ್ ಅವರನ್ನು ಕಣಕ್ಕಿಳಿಸಿದರೆ ಏನು ತಪ್ಪು ಎಂದು ಅವರು ಪ್ರಶ್ನಿಸಿದ್ದಾರೆ.
ಓರ್ವ ಮಹಿಳೆ ಅದು ಕೂಡ ಓರ್ವ ಸಾಧ್ವಿಯಾಗಿ ಅವರು ಸಾಕಷ್ಟು ಅವಮಾನಗಳನ್ನು ಅನುಭವಿಸಿದ್ದಾರೆ ಎಂದು ಮೋದಿಯವರು ಟೈಮ್ಸ್ ನೌ ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.