ನವದೆಹಲಿ:1965ರ ಭಾರತ-ಪಾಕಿಸ್ಥಾನ ಯುದ್ಧಕ್ಕೆ 50 ವರ್ಷಗಳಾಗುತ್ತಿರುವ ಹಿನ್ನಲೆಯಲ್ಲಿ ಬೃಹತ್ ಸಮಾರಂಭವನ್ನು ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಯುದ್ಧದಲ್ಲಿ ಭಾರತ ಅಭುತಪೂರ್ವ ವಿಜಯವನ್ನು ಸಾಧಿಸಿತ್ತು.
ಮಿನಿ ಗಣರಾಜ್ಯೋತ್ಸವದ ರೀತಿಯಲ್ಲಿ ಈ ಯುದ್ಧ ವಿಜಯದ 50ನೇ ವರ್ಷವನ್ನು ಸಂಭ್ರಮಿಸಲು ಸರ್ಕಾರ ನಿರ್ಧರಿಸಿದೆ, ಅದಕ್ಕಾಗಿ ಟ್ಯಾಬ್ಲೋ, ಸಾರ್ವಜನಿಕ ಚರ್ಚೆ ಮತ್ತು ಫಿಲ್ಮ್ ಶೋಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲು ಮುಂದಾಗಿದೆ.
ಈ ಯುದ್ಧದಲ್ಲಿ ಹೋರಾಡಿದ ಸೈನಿಕರಿಗೆ ಸನ್ಮಾನವನ್ನು ಮಾಡಲಾಗುತ್ತಿದೆ ಎನ್ನಲಾಗಿದೆ.
ಆದರೆ ಒನ್ ರ್ಯಾಂಕ್ ಒನ್ ಪೆನ್ಯನ್ ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸೈನಿಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
1965ರಲ್ಲಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಭಾರತ-ಪಾಕಿಸ್ಥಾನ ಯುದ್ಧ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.