ಲಂಡನ್: ಜಾಗತಿಕ ಅರ್ಥ ವ್ಯವಸ್ಥೆಯು1930ರಲ್ಲಿ ಕಂಡಂತೆ ಮತ್ತೆ ಮಹಾ ಆರ್ಥಿಕ ಹಿಂಜರಿತಕ್ಕೆ ಒಳಗಾಗಬಹುದು ಎಂಬ ಎಚ್ಚರಿಕೆಯನ್ನು ಆರ್ಬಿಐ ಗವರ್ನರ್ ರಘುರಾಮ್ ರಾಜನ್ ನೀಡಿದ್ದಾರೆ.
ಲಂಡನ್ ಬ್ಯುಸಿನೆಸ್ ಸ್ಕೂಲ್ ಆಯೋಜಿಸಿದ್ದ ಸಮ್ಮೇಳನದಲ್ಲಿ ‘ಕೇಂದ್ರ ಬ್ಯಾಂಕುಗಳ ದೃಷ್ಟಿಕೋನ’ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು ಈ ಆತಂಕವನ್ನು ವ್ಯಕ್ತಪಡಿಸಿದರು.
ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸುವ ಬದಲು ನಾವು ಬೆಳವಣಿಗೆಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ವರ್ಗಾಯಿಸುತ್ತಿದ್ದೇವೆ, 1930ರ ಮಹಾ ಆರ್ಥಿಕ ಹಿಂಜರಿತದ ವೇಳೆಯೂ ಇದೇ ತರನಾದ ಪ್ರವೃತ್ತಿ ಇತ್ತು ಎಂದು ಅವರು ಹೇಳಿದ್ದಾರೆ.
ಅಲ್ಲದೇ ವಿವಿಧ ದೇಶಗಳು ಅನುಸರಿಸುತ್ತಿರುವ ಸ್ಪರ್ಧಾತ್ಮಕ ಹಣಕಾಸು ನೀತಿಯಿಂದಾಗಿ ಮಹಾ ಆರ್ಥಿಕ ಹಿಂಜರಿತ ಮತ್ತೆ ಸಂಭವಿಸಬಹುದು, ಅಭಿವೃದ್ಧಿ ಮತ್ತು ಅಭಿವೃದ್ಧಿ ಶೀಲ ದೇಶಗಳಲ್ಲಿ ಕೇಂದ್ರ ಬ್ಯಾಂಕುಗಳು ಅಳವಡಿಸಿಕೊಂಡಿರುವ ಆರ್ಥಿಕ ನೀತಿಯ ಬಗ್ಗೆ ಪರಾಮರ್ಶೆ ಮತ್ತು ಚರ್ಚೆ ನಡೆಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜಾಗತಿಕ ಮಟ್ಟದಲ್ಲಿ ಯಾವ ರೀತಿಯ ಆರ್ಥಿಕ ನೀತಿ ರೂಪಿಸಬೇಕು ಮತ್ತು ಕೇಂದ್ರ ಬ್ಯಾಂಕುಗಳು ಯಾವುದಕ್ಕೆ ಅವಕಾಶ ನೀಡಬೇಕು ಎನ್ನುವ ಬಗ್ಗೆ ವಿಸ್ತೃತ ಚರ್ಚೆಯನ್ನು ಆರಂಭಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.
ರಫ್ತು ವಹಿವಾಟು ಹೆಚ್ಚಿಸಲು ಕರೆನ್ಸಿಗಳ ಅತಿಯಾದ ಅಪಮೌಲ್ಯ ಸರಿಯಲ್ಲ, ವಿಶ್ವದ ಎಲ್ಲಾ ಕೇಂದ್ರ ಬ್ಯಾಂಕುಗಳು ಬೆಳವಣಿಗೆಯ ದೃಷ್ಟಿಯಿಂದ ಆಟದ ಹೊಸ ನಿಯಮಗಳನ್ನು ತರಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.