ನವದೆಹಲಿ : ಕೊನೆಗೂ ಜೈಶೇ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಮುಂಬೈ, ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಇದು ಭಾರತದ ರಾಜತಾಂತ್ರಿಕ ಪ್ರಯತ್ನಕ್ಕೆ ದೊರೆತ ಬಹು ದೊಡ್ಡ ವಿಜಯವಾಗಿದೆ.
ಅಂತರಾಷ್ಟ್ರೀಯ ಒತ್ತಡಕ್ಕೆ ಮಣಿದು ಚೀನಾ ತನ್ನ ನಿಲುವನ್ನು ಸಡಿಲಗೊಳಿಸಿದೆ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡುವುದು ಸುಲಭವಾಗಿದೆ.
ಕಳೆದ ಹಲವು ವರ್ಷಗಳಿಂದ, ಅದರಲ್ಲೂ ಮುಖ್ಯವಾಗಿ ಫೆಬ್ರವರಿ 14ರಂದು ಪುಲ್ವಾಮ ದಾಳಿ ನಡೆದ ಬಳಿಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಭಾರತ ಸಾಕಷ್ಟು ಪ್ರಯತ್ನಗಳನ್ನು ನಡೆಸಿತ್ತು. ಭಾರತದ ಪರವಾಗಿ ಫ್ರಾನ್ಸ್ ,ಯುಕೆ ,ಅಮೆರಿಕ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಪ್ರಸ್ಥಾಪವನ್ನು ಸಲ್ಲಿಸಿತ್ತು. ಆದರೆ ಚೀನಾ ತನ್ನ ವೀಟೊ ಅಧಿಕಾರ ಬಳಸಿ ಪ್ರಯತ್ನವನ್ನು ವಿಫಲಗೊಳಿಸಿತ್ತು.
ಆದರೀಗ ಭಯೋತ್ಪಾದನೆ ಬಗೆಗಿನ ಜಾಗತಿಕ ಆಕ್ರೋಶಕ್ಕೆ ವಿಚಲಿತಗೊಂಡಿರುವ ಚೀನಾ ತನ್ನ ನಿಲುವನ್ನು ಬದಲಿಸಿ, ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಲ್ಪಡಲು ಅನುವು ಮಾಡಿಕೊಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.