ಬೆಂಗಳೂರು : ರಂಗಕರ್ಮಿ, ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರು ಬೆಂಗಳೂರಿನಲ್ಲಿ ಇಂದು ಇಹಲೋಕವನ್ನು ತ್ಯಜಿಸಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅಸುನೀಗಿದರು. ಅವರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.
ಹಿರಣ್ಣಯ್ಯ ಅವರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದು, ಹಲವು ನಾಟಕಗಳ ಮೂಲಕ ಸಂಚಲನ ಸೃಷ್ಟಿ ಮಾಡಿದ್ದರು.
ಅವರ ಪಾರ್ಥಿವ ಶರೀರವನ್ನು ತ್ಯಾಗರಾಜನಗರದಲ್ಲಿರುವ ಸ್ವಗೃಹಕ್ಕೆ ತರಲಾಗುತ್ತಿದೆ.
ಹಿರಣ್ಣಯ್ಯ ಅವರು 1934ರ ಫೆಬ್ರವರಿ 15ರಂದು ಮೈಸೂರಿನಲ್ಲಿ ಜನಿಸಿದರು. ಇವರ ತಂದೆ ಕೆ. ಹಿರಣ್ಣಯ್ಯ ಕೂಡ ನಟ, ನಿರ್ದೇಶಕ ಹಾಗೂ ಕನ್ನಡ ಚಿತ್ರರಂಗದಲ್ಲಿ ಬರಹಗಾರ ಹಾಗೂ ರಂಗ ಕಲಾವಿದರಾಗಿದ್ದರು. ಮಾಸ್ಟರ್ ಹಿರಣ್ಣಯ್ಯ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದು, ಹಲವು ನಾಟಕಗಳ ಮೂಲಕ ಸಂಚಲನ ಸೃಷ್ಟಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.