ನವದೆಹಲಿ : ಸಿಬಿಎಸ್ ಸಿ 12 ನೇ ತರಗತಿಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಇಬ್ಬರು ಬಾಲಕಿಯರು ದೇಶಕ್ಕೆ ಟಾಪರ್ಸ್ಗಳಾಗಿ ಹೊರಹೊಮ್ಮಿದ್ದಾರೆ. ಸುಮಾರು 13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಘಾಜಿಯಾಬಾದ್ನ ಹಂನ್ಸಿಕಾ ಶುಕ್ಲಾ ಮತ್ತು ಮುಜಾಫರನಗರದ ಕರಿಷ್ಮಾ ಅರೋರಾ ಟಾಪರ್ಸ್ಗಳಾಗಿ ಹೊರಹೊಮ್ಮಿದ್ದಾರೆ. ಇವರಿಬ್ಬರೂ 500 ಅಂಕಗಳ ಪೈಕಿ 499 ಅಂಕಗಳನ್ನು ಪಡೆದುಕೊಂಡಿದ್ದಾರೆ.
http://cbse.nic.in ಮತ್ತು http://cbseresults.nic.in ವೆಬ್ಸೈಟ್ನಲ್ಲಿ ಸಿಬಿಎಸ್ಇ ಫಲಿತಾಂಶ ಪ್ರಕಟಗೊಂಡಿದೆ.
ಎರಡನೇ ಸ್ಥಾನವನ್ನು ಮೂರು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳು 498 ಅಂಕಗಳನ್ನು ಪಡೆದುಕೊಂಡಿದ್ದಾರೆ. ರಿಷಿಕೇಶದ ಗೌರಂಗಿ ಚಾವಲ, ರಾಯ್ಬರೇಲಿಯ ಐಶ್ವರ್ಯ, ಹರಿಯಾಣದ ಭವ್ಯ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ.
ಮೂರನೇ ಸ್ಥಾನವನ್ನು 18 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾದ 10 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ಕೇರಳದ ತಿರುವನಂತಪುರಂ ಶೇ.98.2 ಫಲಿತಾಂಶವನ್ನು ದಾಖಲಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.