ನವದೆಹಲಿ: ಹಣಕಾಸು ವಂಚನೆ ಮತ್ತು ಭಯೋತ್ಪಾದನಾ ನೆರವಿನ ವಿರುದ್ಧದ ಜಾಗತಿಕ ಹೋರಾಟಕ್ಕೆ ಸಹಕಾರ ನೀಡದೇ ಇರುವ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ”ಫಿನಾನ್ಶಿಯಲ್ ಟಾಸ್ಕ್ ಫೋರ್ಸ್ (FATF)ನಿಂದ ಈಗಾಗಲೇ ಪಾಕಿಸ್ಥಾನ ಗ್ರೇ ಪಟ್ಟಿಯಲ್ಲಿದೆ. ಜೂನ್ ತಿಂಗಳಲ್ಲಿ FATF ಸಭೆ ಸೇರಲಿದೆ, ಈ ವೇಳೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಭಯೋತ್ಪಾದಕರ ವಿರುದ್ಧ ಕ್ರಮ ಜರುಗಿಸಲು ವಿಫಲಗೊಂಡಿರುವ ಹಿನ್ನಲೆಯಲ್ಲಿ ಪಾಕಿಸ್ಥಾನವನ್ನು FATF ಕಪ್ಪು ಪಟ್ಟಿಗೆ ಸೇರಿಸಬೇಕು ಎಂದಿದ್ದಾರೆ. ವಿಶ್ವಸಂಸ್ಥೆಯು ಜೈಶೇ ಇ ಮೊಹಮ್ಮದ್ ಉಗ್ರ ಮಸೂದ್ ಅಝರ್ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಅವರೂ, FATF ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಹಲವಾರು ದುಷ್ಕೃತ್ಯಗಳನ್ನು ಎಸಗಿದ್ದಾನೆ ಎಂದು ಗೊತ್ತಿದ್ದರೂ ಮಸೂದ್ ಅಝರ್ನನ್ನು ತನ್ನ ನೆಲದೊಳಗೆ ಭದ್ರವಾಗಿಟ್ಟುಕೊಂಡಿದ್ದ ಪಾಕಿಸ್ಥಾನ ಈಗ ಜಗತ್ತಿನ ಮುಂದೆ ತಲೆ ತಗ್ಗಿಸುವಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.