ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ನೀತಿ(ಎನ್ಐಟಿಐ) ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
ಈ ವೇಳೆ ಅವರು ಬಿಜೆಪಿಯ ಉನ್ನತ ನಾಯಕರುಗಳನ್ನು ಭೇಟಿಯಾಗಿ ಲಲಿತ್ ಮೋದಿ ವಿವಾದದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ರಾಜೆ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆಯನ್ನು ನಡೆಸುತ್ತಿದೆ. ಆದರೆ ಬಿಜೆಪಿ ನಾಯಕರು ರಾಜೆ ಬೆನ್ನಿಗೆ ನಿಂತಿದ್ದು, ಅವರು ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ರಾಜೆ ಪುತ್ರನ ಕಂಪನಿಗಳಿಗೆ ಲಲಿತ್ ಮೋದಿ ಕೋಟ್ಯಾಂತರ ಹೂಡಿಕೆ ಮಾಡಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿದ್ದು, ಇದು ರಾಜೆ ಅವರಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.