ನವದೆಹಲಿ: ವಿಶ್ವದ ಅತೀದೊಡ್ಡ ಪ್ರಜಾಪ್ರಭುತ್ವ ಭಾರತ ಕಳೆದ ಒಂದು ತಿಂಗಳಿನಿಂದ ಚುನಾವಣೆಯನ್ನು ಎದುರಿಸುತ್ತಿದೆ. ಈ ಬೃಹತ್ ಆಡಳಿತಾತ್ಮಕ ಮತ್ತು ರಾಜಕೀಯ ಅದ್ಭುತವನ್ನು ನೋಡುವುದಕ್ಕಾಗಿ ವಿಶ್ವದ ವಿವಿಧ ದೇಶಗಳ ಸುಮಾರು 20 ಚುನಾವಣಾ ನಿರ್ವಹಣಾ ಮಂಡಳಿಗಳ ಮುಖ್ಯಸ್ಥರು, ಪ್ರತಿನಿಧಿಗಳು ಭಾರತಕ್ಕೆ ಆಗಮಿಸಿದ್ದಾರೆ.
65 ಮಂದಿಯ ನಿಯೋಗ ಭಾರತಕ್ಕೆ ಬಂದಿವೆ. ಎಲೆಕ್ಷನ್ ವಿಸಿಟರ್ಸ್ ಪ್ರೋಗ್ರಾಂ ಅಡಿಯಲ್ಲಿ ಚುನಾವಣಾ ಆಯೋಗವು ಇವರನ್ನು ಆಹ್ವಾನಿಸಿದೆ.
More than 65 Representatives from 20 Election Management Bodies across the World witness 17th Lok Sabha Elections as part of Election Commission’s Election Visitors’ Programme https://t.co/IdLVpWfXZd
— Sheyphali Sharan (@SpokespersonECI) May 12, 2019
ಆಸ್ಟ್ರೇಲಿಯಾ, ಬಾಂಗ್ಲಾದೇಶ, ಭೂತಾನ್, ಬೊಸ್ನಿಯಾ ಮತ್ತು ಹರ್ಜೆಗೋವಿನಾ, ಫಿಜಿ, ಜಾರ್ಜಿಯಾ, ಕೀನ್ಯಾ, ರಿಪಬ್ಲಿಕ್ ಆಫ್ ಕೊರಿಯಾ, ಕಿರ್ಗಿಸ್ತಾನ್, ಮಲೆಷ್ಯಾ, ಮೆಕ್ಸಿಕೋ, ಮ್ಯಾನ್ಮಾರ್, ರೋಮಾನಿಯಾ, ರಷ್ಯಾ, ಶ್ರೀಲಂಕಾ, ಸುರಿನಾಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಉಜ್ಬೇಕಿಸ್ತಾನ್ ಮತ್ತು ಜಿಂಬಾಬ್ವೆ ಮತ್ತು ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ ಅಂಡ್ ಎಲೆಕ್ಟೋರಲ್ ಅಸಿಸ್ಟೆನ್ಸ್ (IDEA)ದ ಪ್ರತಿನಿಧಿಗಳು ಭಾರತಕ್ಕೆ ಬಂದು ಚುನಾವಣಾ ಪ್ರಕ್ರಿಯೆಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ.
ನಿಯೋಗವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು, ಭಾರತೀಯ ಚುನಾವಣಾ ಆಯೋಗವು ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಯನ್ನು ನಡೆಸಲು ಬದ್ಧವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.