ಭೋಪಾಲ್: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. ಸರ್ಕಾರ ಅಲ್ಪ ಮತಕ್ಕಿಳಿದಿದ್ದು, ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದೆ.
ಮಧ್ಯಪ್ರದೇಶದ ಅಸೆಂಬ್ಲಿಯ ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ ಅವರು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಗೆ ಪತ್ರವನ್ನು ಬರೆದಿದ್ದು, ಹಲವಾರು ವಿಷಯಗಳನ್ನು ಚರ್ಚಿಸುವ ಸಲುವಾಗಿ ತುರ್ತು ಅಧಿವೇಶನ ಕರೆಯಬೇಕು ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ 2-3 ಸ್ಥಾನ ಪಡೆಯಬಹುದೆಂದು ಕೆಲ ಸಮೀಕ್ಷೆಗಳು ಹೇಳಿವೆ. ಇದು ಕಾಂಗ್ರೆಸ್ ನೇತೃತ್ವದ ಕಮಲ್ನಾಥ್ ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಆದರೂ ತಾನು ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಿಲ್ಲ ಎಂದು ಕಮಲ್ನಾಥ್ ಹೇಳಿಕೊಂಡಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನ ಗೆದ್ದಿತ್ತು, ಕಾಂಗ್ರೆಸ್ 109 ಸ್ಥಾನ ಗೆದ್ದಿತ್ತು. ಕಾಂಗ್ರೆಸ್ ಪಕ್ಷಕ್ಕೆ ಬಹುಜನ ಸಮಾಜವಾದಿ, ಸಮಾಜವಾದಿ, ಪಕ್ಷೇತರರು ಬೆಂಬಲ ನೀಡಿದ ಹಿನ್ನಲೆಯಲ್ಲಿ ಅದು ಸರ್ಕಾರ ರಚನೆ ಮಾಡಿದೆ. ಲೋಕಸಭಾ ಚುನಾವಣೆಯ ಬಳಿಕ ಇಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.