ಗೋಪಾಲ್ಪೋರಾ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಗೋಪಾಲ ಪೋರಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಸೇನೆಯ 34 ರಾಷ್ಟ್ರೀಯ ರೈಫಲ್ಸ್ ಮತ್ತು ಎಸ್ ಒಜಿ ಜಂಟಿಯಾಗಿ ಈ ಎನ್ಕೌಂಟರ್ ಆರಂಭಿಸಿದ್ದವು.
ಗೋಪಾಲ್ಪೋರಾ ಗ್ರಾಮದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈ ವೇಳೆ ಉಗ್ರರು ಗುಂಡು ಹಾರಿಸಿದ್ದು, ಬಳಿಕ ಎನ್ಕೌಂಟರ್ ಆರಂಭಗೊಂಡಿದೆ. ಮೃತ ಉಗ್ರರ ದೇಹಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮೃತ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಆದರೆ ಇವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಕುಲ್ಗಾಂ ಮತ್ತು ಶೋಪಿಯಾನ ಪ್ರದೇಶಗಳಲ್ಲಿ ಇಂಟರ್ನೆಟ್ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ.
ಶನಿವಾರ ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಕಣಿವೆ ರಾಜ್ಯದಲ್ಲಿ ಉಗ್ರರ ದಮನ ಕಾರ್ಯವನ್ನು ಸೇನಾಪಡೆಗಳು ಅತ್ಯಂತ ಕ್ಷಿಪ್ರಗತಿಯಲ್ಲಿ ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.